ಭಾರೀ ಮಳೆ: ಜೂನ್‌ 28ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ನಾಳೆ, ಶುಕ್ರವಾರ (ಜೂನ್‌ 28)ರಂದು ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ (ಜೂನ್‌ 28)ರಂದು ರಜೆ ಘೋಷಿಸಲಾಗಿದೆ.
ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕೂಡ ಭಾರೀ ಮಳೆಯಿಂದಾಗಿ ಜೂನ್ 27ರಂದು ಸಹ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement