ನವದೆಹಲಿ : ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಪಾಟ್ನಾದ ಮನೀಶಕುಮಾರ ಮತ್ತು ಅಶುತೋಷ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶಕುಮಾರ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. ಅಲ್ಲದೆ ವಿದ್ಯಾರ್ಥಿಗಳಿಗೆ ವಸತಿ ಒದಗಿಸಿದ್ದಾನೆ.
ಗುರುವಾರ ಇಬ್ಬರನ್ನು ವಿಚಾರಣೆಗಾಗಿ ಸಿಬಿಐ ಕರೆದಿತ್ತು. ವಿಚಾರಣೆಯ ಬಳಿಕ ಇಬ್ಬರನ್ನು ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳನ್ನು ಬಂಧನ ಮಾಡುವ ಮೊದಲು ಬಿಹಾರ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪರೀಕ್ಷೆಗೆ ಒಂದು ದಿನ ಮುಂಚಿತವಾಗಿ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ತಾನು ಮತ್ತು ಇತರ ಕೆಲವರು ಪಡೆದುಕೊಂಡಿದ್ದೇವೆ ಎಂದು ಹೇಳಿದ ಅಭ್ಯರ್ಥಿಯನ್ನು ಸಿಬಿಐ ವಿಚಾರಣೆ ನಡೆಸಿದೆ.
ನೀಟ್ ಪೇಪರ್ ಸೋರಿಕೆ ಪ್ರಕರಣದಲ್ಲಿ ಸಿಬಿಐ ಆರು ಪ್ರಥಮ ಮಾಹಿತಿ ವರದಿಗಳನ್ನು (ಎಫ್‌ಐಆರ್) ದಾಖಲಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ