ಕಾರವಾರ : ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಸಾವು

ಕಾರವಾರ: ಭಾರಿ ಮಳೆಗೆ ಮಣ್ಣಿನ ಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಉತ್ತರ ಕನ್ನಡದ ಕಾರವಾರದ ಅಸ್ನೋಟಿಯ ಆರವ ಗ್ರಾಮದ ತೋರ್ಲೆಭಾಗದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.
ಮೃತ ವೃದ್ಧೆಯನ್ನು ರುಕ್ಮಾ ಗುಲಾಬಿ  ಮಾಳ್ಸೇಕರ (70) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆ, ಚಿತ್ತಾಕುಲದಲ್ಲಿ ಹಣ್ಣಿನ ವ್ಯಾಪಾರ ಮಾಡಿ ಜೀವನ ಸಾಗಿಸುತ್ತಿದ್ದರು. . ಭಾರಿ ಮಳೆ ಬರುತ್ತಿದ್ದ ಹಿನ್ನೆಲೆ ಮೃತ ವೃದ್ಧೆ ಹಳೇ ಅಂಗಡಿಯ ಬಳಿ ನಿಂತಿದ್ದರು. ಈ ವೇಳೆ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ. ಅವರು ಮಣ್ಣಿನಲ್ಲಿ ಮುಚ್ಚಿಹೋಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಆಡಿಯೊ ವೈರಲ್‌; ಮೂವರು ಪಿಎಸ್‌ಐಗಳು ಅಮಾನತು...?

ನಿಮ್ಮ ಕಾಮೆಂಟ್ ಬರೆಯಿರಿ

advertisement