ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾನುವಾರ (ಜೂನ್ 30)ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಗಾಳಿಯ ವೇಗವೂ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ