ಜುಲೈ 2ರ ವರೆಗೆ ಕರ್ನಾಟಕದ 6 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದ ಕರಾವಳಿಯ ಸಮುದ್ರತೀರಗಳಲ್ಲಿ ದಟ್ಟಮೋಡ ಇರುವುದರಿಂದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿಯೂ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆ ಬೀಳಲಿದೆ. ಹೀಗಾಗಿ ಈ ಆರು ಜಿಲ್ಲೆಗಳಿಗೆ ನಾಳೆ ಸೋಮವಾರ (ಜುಲೈ 1 ಮತ್ತು ಮಂಗಳವಾರ (ಜುಲೈ 2ರ) ‘ಹಳದಿ ಎಚ್ಚರಿಕೆ’ ನೀಡಲಾಗಿದೆ. ಈ  ಜಿಲ್ಲೆಗಳಲ್ಲಿ ಗಾಳಿಯ ವೇಗವು ಗಂಟೆಗೆ 30-40 kmp ವರೆಗೆ ಇರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಚಾಮರಾಜನಗರ, ತುಮಕೂರು, ದಾವಣಗೆರೆ, ಹಾಸನ, ಚಿಕ್ಕಮಗಳೂರಲ್ಲಿ ಒಂದಷ್ಟು ಕಡೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 kmp ವರೆಗೆ ಇರಬಹುದು. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ, ಹಾವೇರಿ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 30-40 kmp ವರೆಗೆ ಇರಬಹುದು ಎಂದು ತಿಳಿಸಿದೆ.

ಪ್ರಮುಖ ಸುದ್ದಿ :-   ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement