
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು. ಅಲ್ಲದೆ ಅನೇಕ ಕೃತಿಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.



ನಿಮ್ಮ ಕಾಮೆಂಟ್ ಬರೆಯಿರಿ