ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2001ರಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ.
ಕೆವಿಐಸಿಯ ಮುಖ್ಯಸ್ಥರಾಗಿದ್ದ ವಿ.ಕೆ. ಸಕ್ಸೇನಾ (ಈಗ ದೆಹಲಿಯ ಲೆಫ್ಟನೆಂಟ್ ಗವರ್ನರ್) ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಕ್ಸೇನಾ ಅವರ ಘನತೆಗೆ ಧಿಕ್ಕೆ ತಂದಿರುವ ಕಾರಣ ಅವರಿಗೆ 10 ಲಕ್ಷ ರೂ. ಹಣವನ್ನು ದಂಡವಾಗಿ ನೀಡಬೇಕು ಎಂದು ಸಹ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಆದೇಶವನ್ನು 30 ದಿನಗಳವರೆಗೆ ಅಮಾನತಿನಲ್ಲಿ ಇರಿಸಲಾಗುವುದು ಎಂದು ಸಾಕೇತ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಪಾಟ್ಕರ್ ಅವರ ವಯಸ್ಸು ಮತ್ತು ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಒಂದು ಅಥವಾ ಎರಡು ವರ್ಷಗಳಷ್ಟು ಅಧಿಕ ಶಿಕ್ಷೆಯನ್ನು ನೀಡಲಾಗುತ್ತಿಲ್ಲ ಎಂದು ಕೋರ್ಟ್ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ