ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ನವದೆಹಲಿ: ಈಶಾನ್ಯ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದಲ್ಲಿ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸೋಮವಾರ ತಿಳಿಸಿದೆ.
ವರ್ಚುವಲ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತನಾಡಿದ ಐಎಂಡಿ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಅವರು, ಒಟ್ಟಾರೆಯಾಗಿ ದೇಶದಾದ್ಯಂತ ಜುಲೈ ಸರಾಸರಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿ ಇರುತ್ತದೆ. ಜುಲೈನಲ್ಲಿ ಮಳೆಯ ದೀರ್ಘಾವಧಿ ಸರಾಸರಿ 28.04 ಸೆಂ.ಮೀ. ಇದೆ. ಆದರೆ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ ಬೀಳಬಹುದು ಎಂದು ನರೀಕ್ಷಿಸಲಾಗಿದೆ. ಅಂದರೆ ಶೇ 106ರಷ್ಟು ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ ಎಂದು ಹೇಳಿದರು..

ಈಶಾನ್ಯ ಭಾರತದ ಹಲವು ಭಾಗಗಳು ಮತ್ತು ವಾಯವ್ಯ, ಪೂರ್ವ ಮತ್ತು ಆಗ್ನೇಯ ಪರ್ಯಾಯದ್ವೀಪದ ಕೆಲವು ಭಾಗಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ” ಎಂದು ಅವರು ಹೇಳಿದ್ದಾರೆ. ಜುಲೈನಲ್ಲಿ ಉತ್ತಮ ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದೇವೆ. ಮೋಡ ಕವಿದ ವಾತಾವರಣವು ಸಾಮಾನ್ಯವಾಗಿ ಹೆಚ್ಚಿನ ಕನಿಷ್ಠ ತಾಪಮಾನಕ್ಕೆ ಕಾರಣವಾಗುತ್ತದೆ ಎಂದು ಮೊಹಾಪಾತ್ರ ಹೇಳಿದರು.
ಭಾರತದ ಪಶ್ಚಿಮ ಕರಾವಳಿಯನ್ನು ಹೊರತುಪಡಿಸಿ ವಾಯವ್ಯ ಭಾರತ ಮತ್ತು ದಕ್ಷಿಣ ಭಾರತದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರಲಿದೆ. ಮಧ್ಯ ಭಾರತ, ಪೂರ್ವ ಮತ್ತು ಈಶಾನ್ಯ ಭಾರತದ ಹಲವು ಭಾಗಗಳಲ್ಲಿ ಮತ್ತು ಪಶ್ಚಿಮ ಕರಾವಳಿಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿಗೆ ಇರುವ ಸಾಧ್ಯತೆಯಿದೆ” ಎಂದು ಎಂದು ಐಎಂಡಿ ಹೇಳಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

ವಾಯವ್ಯ ಭಾರತದ ಕೆಲವು ಭಾಗಗಳು ಮತ್ತು ಮಧ್ಯ ಭಾರತದ ಪಕ್ಕದ ಪ್ರದೇಶಗಳು ಮತ್ತು ಆಗ್ನೇಯ ಪರ್ಯಾಯದ್ವೀಪದ ಭಾರತದ ಕೆಲವು ಪಾಕೆಟ್‌ಗಳನ್ನು ಹೊರತುಪಡಿಸಿ ದೇಶದ ಅನೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಅದು ಹೇಳಿದೆ.
ವಾಯವ್ಯ ಭಾರತವು 1901 ನಂತರ ಜೂನ್‌ ತಿಂಗಳಲ್ಲಿ ಅತಿ ಹೆಚ್ಚು ಉಷ್ಣತೆಯನ್ನು ದಾಖಲಿಸಿದೆ. ಜೂನ್‌ ತಿಂಗಳ ಸರಾಸರಿ ತಾಪಮಾನವು 31.73 ಡಿಗ್ರಿ ಸೆಲ್ಸಿಯಸ್ ಆಗಿದೆ ಎಂದು ಐಎಂಡಿ (IMD) ಸೋಮವಾರ ತಿಳಿಸಿದೆ. ಆದರೆ ಈ ಭಾಗದಲ್ಲಿ ಮಾಸಿಕ ಸರಾಸರಿ ಗರಿಷ್ಠ ತಾಪಮಾನವು 38.02 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದು ವಾಡಿಕೆಗಿಂತ 1.96 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಐಎಂಡಿ (IMD) ಡೇಟಾ ಪ್ರಕಾರ ಸರಾಸರಿ ಕನಿಷ್ಠ ತಾಪಮಾನವು 25.44 ಡಿಗ್ರಿ ಸೆಲ್ಸಿಯಸ್ ಆಗಿದೆ. ಆದರೆ ಜೂನ್‌ ತಿಂಗಳಲ್ಲಿ ಇದು ವಾಡಿಕೆಗಿಂತ 1.35 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ.
ವಾಯುವ್ಯ ಭಾರತವು ಜೂನ್‌ನಲ್ಲಿ 31.73 ಡಿಗ್ರಿ ಸೆಲ್ಸಿಯಸ್ ಸರಾಸರಿ ತಾಪಮಾನವನ್ನು ದಾಖಲಿಸಿದೆ, ವಾಡಿಕೆಗಿಂತ 1.65 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ ಮತ್ತು 1901 ರಿಂದ ಅತಿ ಹೆಚ್ಚು ಎಂದು ಐಎಂಡಿ (IMD) ಮುಖ್ಯಸ್ಥರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ಜೂನ್‌ನಲ್ಲಿ ಶೇ 11ರಷ್ಟು ಮಳೆ ಕೊರತೆ
ದೇಶದಲ್ಲಿ ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮಳೆ ಕೊರತೆಯು ಶೇ 11ರಷ್ಟಿದ್ದು ಐದು ವರ್ಷಗಳಲ್ಲೇ ಇದು ಅಧಿಕ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ ತಿಂಗಳ ವಾಡಿಕೆ ಮಳೆ 165.3 ಮಿ.ಮೀ. ಆಗಿದ್ದು ಈ ಬಾರಿ ಸರಾಸರಿ 147.2 ಮಿ.ಮೀ. ಮಳೆಯಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರ ವಾಡಿಕೆಗಿಂತ ಶೇ 14ರಷ್ಟು ಅಧಿಕ ಮಳೆ ಬಿದ್ದಿದೆ. ಆದರೆ ವಾಯವ್ಯ ಭಾರತದಲ್ಲಿ ಶೇ 33 ಕೇಂದ್ರ ಭಾರತದಲ್ಲಿ ಶೇ 14 ಹಾಗೂ ಪೂರ್ವ ಮತ್ತು ಈಶಾನ್ಯ ಭಾಗದಲ್ಲಿ ಶೇ 13ರಷ್ಟು ಮಳೆ ಕೊರತೆ ಉಂಟಾಗಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement