ಧಾರ್ಮಿಕ ಸಭೆಗಳಲ್ಲಿ ಮತಾಂತರ ಮುಂದುವರೆದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ: ಅಲಾಹಾಬಾದ್ ಹೈಕೋರ್ಟ್

ಲಕ್ನೋ : ಧಾರ್ಮಿಕ ಸಭೆಗಳಲ್ಲಿ ಮತಾಂತರಕ್ಕೆ ತಡೆ ಒಡ್ಡದಿದ್ದರೆ ಮುಂದೊಂದು ದಿನ ದೇಶದ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುತ್ತಾರೆ ಎಂದು ಅಲಾಹಾಬಾದ್‌ ಹೈಕೋರ್ಟ್‌ ಸೋಮವಾರ ಹೇಳಿದೆ.
ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆ ಕಾಯಿದೆ, 2021ರ ಅಡಿಯಲ್ಲಿ ಆರೋಪಿಯ ಜಾಮೀನು ಅರ್ಜಿ ವಜಾಗೊಳಿವಾಗ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿದ್ದ “ಕ್ಷೇಮ” ಕೂಟಕ್ಕೆ ಮಾಹಿತಿದಾರನ ಸಹೋದರನನ್ನು ಆತನ ಗ್ರಾಮದಿಂದ ಕರೆದೊಯ್ಯಲಾಗಿತ್ತು. ಅವನೊಂದಿಗೆ, ಹಳ್ಳಿಯ ಅನೇಕ ವ್ಯಕ್ತಿಗಳನ್ನು ಕ್ರೈಸ್ತ ಧರ್ಮಕ್ಕೆ ಪರಿವರ್ತಿಸಲು ಕರೆದೊಯ್ಯಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಆಚರಣೆ ಮುಂದುವರೆಸಲು ಅವಕಾಶ ನೀಡಿದರೆ ಮುಂದೊಂದು ದಿನ ಬಹುಸಂಖ್ಯಾತರೆಲ್ಲಾ ಅಲ್ಪಸಂಖ್ಯಾತರಾಗುತ್ತಾರೆ. ಧರ್ಮ ಬದಲಾಯಿಸುವ ಇಂತಹ ಧಾರ್ಮಿಕ ಸಭೆಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಉತ್ತರ ಪ್ರದೇಶದ ಹಮೀರ್‌ಪುರದಿಂದ ದೆಹಲಿಯಲ್ಲಿ ಮತಾಂತರಕ್ಕೆ ಜನರನ್ನು ಕರೆದೊಯ್ದ ಆರೋಪ ಹೊತ್ತಿರುವ ಕೈಲಾಶ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಿಚಾರಣೆ ನಡೆಸುತ್ತಿದೆ.
ಎಫ್‌ಐಆರ್ ಪ್ರಕಾರ ಕೈಲಾಶ ಎಂಬಾತ ರಾಮಕಲಿ ಪ್ರಜಾಪತಿಯ ಸಹೋದರ ರಾಮಪಾಲ ಅವರನ್ನು ದೆಹಲಿಗೆ ಕರೆದೊಯ್ದಿದ್ದ ಮತ್ತು ರಾಮಪಾಲ ಮನೆಗೆ ಹಿಂತಿರುಗಲಿಲ್ಲ. ರಾಮಪಾಲ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಮತ್ತು ಕೈಲಾಶ ದೆಹಲಿಯ ಕೂಟದಲ್ಲಿ ರಾಮಪಾಲನಿಗೆ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಒಂದು ವಾರದಲ್ಲಿ ಮನೆಗೆ ಬರುತ್ತಾರೆ ಎಂದು ಹೇಳಿದ್ದ.. ರಾಮಪಾಲ ಹಿಂತಿರುಗದಿದ್ದಾಗ ಮನೆಯವರು ಕೈಲಾಶನನ್ನು ಈ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ತೃಪ್ತಿಕರ ಉತ್ತರ ಸಿಗಲಿಲ್ಲ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.
ಹಮೀರಪುರ ಗ್ರಾಮದ ಅನೇಕ ಜನರನ್ನು ದೆಹಲಿಯ ಸಭೆಗೆ ಕರೆದೊಯ್ದು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಎಫ್‌ಐಆರ್ ಹೇಳುತ್ತದೆ. ಅಪಹರಣ ಮತ್ತು ಉತ್ತರ ಪ್ರದೇಶ ಕಾನೂನುಬಾಹಿರ ಧರ್ಮ ಪರಿವರ್ತನೆಯ ನಿಷೇಧ ಕಾಯಿದೆ, 2021 ರ ನಿಬಂಧನೆಗಳ ಅಡಿಯಲ್ಲಿ ಕೈಲಾಶನನ್ನು ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ

ಉತ್ತರ ಪ್ರದೇಶ ಸರ್ಕಾರದ ಪರ ವಕೀಲರಾದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪಿ.ಕೆ. ಗಿರಿ ಅವರು, ಇಂತಹ ಕೂಟಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರನ್ನು ಕ್ರೈಸ್ತ ಧರ್ಮಕ್ಕೆ ಪರಿವರ್ತಿಸಲಾಗುತ್ತಿದೆ. ಕೈಲಾಶ ಗ್ರಾಮದಿಂದ ಜನರನ್ನು ಮತಾಂತರಕ್ಕೆ ಕರೆದೊಯ್ದಿದ್ದಾನೆ ಮತ್ತು ಪ್ರತಿಯಾಗಿ ಹಣ ಪಡೆಯುತ್ತಿದ್ದ ಎಂದು ಹೇಳಿದ ಸಾಕ್ಷಿಗಳ ಹೇಳಿಕೆಗಳನ್ನು ತೋರಿಸಿದರು.
ಕೈಲಾಶ ವಕೀಲ ಸಾಕೇತ್ ಜೈಸ್ವಾಲ್, ರಾಮಪಾಲ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿಲ್ಲ ಮತ್ತು ಕ್ರೈಸ್ತ ಕೂಟದಲ್ಲಿ ಮಾತ್ರ ಭಾಗವಹಿಸಿದ್ದರು ಎಂದು ಹೇಳಿದರು. “ಇಂತಹ ಕೂಟವನ್ನು ನಡೆಸುತ್ತಿದ್ದವರು ಸೋನು ಪಾಸ್ಟರ್, ಮತ್ತು ಅವರು ಈಗಾಗಲೇ ಜಾಮೀನು ಪಡೆದಿದ್ದಾರೆ” ಎಂದು ವಾದಿಸಿದರು.
ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಸಂವಿಧಾನದ 25ನೇ ವಿಧಿ ಜನರು ತಮ್ಮಿಚ್ಛೆಯ ಧರ್ಮ ಪಾಲಿಸಲು ಅನುಮತಿಸುತ್ತದೆ. ಆದರೆ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಳಿಸಲು ಅವಕಾಶ ನೀಡುವುದಿಲ್ಲ “ಪ್ರಚಾರ” ಎಂಬ ಪದ ಧರ್ಮ ಪ್ರಚಾರವನ್ನು ಹೇಳುತ್ತದೆ ಆದರೆ ಯಾವುದೇ ವ್ಯಕ್ತಿಯನ್ನು ಆತನ ಧರ್ಮದಿಂದ ಇನ್ನೊಂದು ಧರ್ಮಕ್ಕೆ ಪರಿವರ್ತಿಸುವಂತೆ ಹೇಳುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.
ಉತ್ತರ ಪ್ರದೇಶದೆಲ್ಲೆಡೆ ಆರ್ಥಿಕವಾಗಿ ಬಡವರಾಗಿರುವವರನ್ನು ಅತಿ ವೇಗವಾಗಿ ಕ್ರೈಸ್ತ ಧರ್ಮಕ್ಕೆ ಕಾನೂನುಬಾಹಿರವಾಗಿ ಮತಾಂತರ ಮಾಡಲಾಗುತ್ತಿದೆ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಪ್ರಕರಣದ ಆರೋಪಿಗೆ ಅದು ಜಾಮೀನು ನಿರಾಕರಿಸಿತು.

ಪ್ರಮುಖ ಸುದ್ದಿ :-   ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement