ಜುಲೈ 9ರವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 9ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ ೭ರ ವರೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಅಲ್ಲದೆ, ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಜುಲೈ 7ರ ಬಳಿಕ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕಲಬುರಗಿ, ಬೀದರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕಷಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಅದು ತಿಳಿಸಿದೆ. ಕೆಲವು ಕಡೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement