ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ; ಹೇಮಂತ ಸೊರೇನ್ ಮತ್ತೆ ಸಿಎಂ..!

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು, ಬುಧವಾರ ರಾಜೀನಾಮೆ ಸಲ್ಲಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ.
ರಾಜ್ಯಪಾಲರಿಗೆ ಚಂಪೈ ಸೊರೇನ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಹೇಮಂತ್ ಸೊರೇನ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇದೀಗ ಹೇಮಂತ್ ಸೊರೇನ್ ಸರ್ಕಾರ ರಚಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸುವ ಮೊದಲು ಜನವರಿಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಬಳಿಕ ಚಂಪೈ ಸೊರೇನ್ ಅವರು ಮುಖ್ಯಮಂತ್ರಿಯಾಗಿದ್ದರು. ಕಳೆದ ವಾರ ಅವರಿಗೆ ಜಾಮೀನು ನೀಡಲಾಗಿತ್ತು. ಕಳೆದ ವಾರ ಅವರಿಗೆ ಜಾಮೀನು ಮಂಜೂರು ಮಾಡಿದ ಜಾರ್ಖಂಡ್ ಹೈಕೋರ್ಟ್, “ಆಪಾದಿತ ಅಪರಾಧದಲ್ಲಿ ಅವರು ತಪ್ಪಿತಸ್ಥನಲ್ಲ” ಎಂದು ನಂಬಲು ಕಾರಣವಿದೆ ಎಂದು ಹೇಳಿದೆ.
ಜೆಎಂಎಂನ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷವು ಹೇಮಂತ್ ಸೊರೇನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬುಧವಾರ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಅವರು ನಾಯಕರಾಗಿ ಆಯ್ಕೆಯಾಗಿದ್ದಾರೆ. ಚಂಪೈ ಸೊರೇನ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಹೇಮಂತ್ ಸೊರೇನ್ ಮತ್ತೆ ಮುಖ್ಯಮಂತ್ರಿ ಆಗುವ ಕುರಿತು ಆಡಳಿತಾರೂಢ ಇಂಡಿಯಾ ಮೈತ್ರಿಕೂಟದ ನಾಯಕರು ಒಮ್ಮತಕ್ಕೆ ಬಂದಿದ್ದಾರೆ. ಸಭೆಯಲ್ಲಿ ರಾಜ್ಯಾಧ್ಯಕ್ಷ ರಾಜೇಶ ಠಾಕೂರ್, ಕಾಂಗ್ರೆಸ್‌ನ ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ಮತ್ತು ಹೇಮಂತ್ ಸೊರೇನ್‌ ಅವರ ಪತ್ನಿ ಮತ್ತು ಶಾಸಕಿ ಕಲ್ಪನಾ ಸೊರೆನ್ ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ವಿಜಯಪುರ : 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ 58 ಮಂದಿ ಸಾವಿಗೀಡಾಗಿದ್ದ ಕೊಯಮತ್ತೂರು ಸ್ಫೋಟದ ಆರೋಪಿ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement