ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್.ಗಂಗಾಧರ ನೇಮಕ

ನವದೆಹಲಿ: ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ಅಧ್ಯಕ್ಷ ಹಾಗೂ ನಿಮ್ಹಾನ್ಸ್‌ ಮಾಜಿ ನಿರ್ದೇಶಕರಾಗಿದ್ದ ಕನ್ನಡಿಗ ಡಾ ಬಿ.ಎನ್. ಗಂಗಾಧರ ಅವರನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗದ (National Medical Commission) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕ್ಯಾಬಿನೆಟ್ ನೇಮಕಾತಿ ಸಮಿತಿಯು (ACC) ಎನ್‌ಎಂಸಿ (NMC) ಮತ್ತು ಸ್ವಾಯತ್ತ ಮಂಡಳಿಗಳ ಹುದ್ದೆಗಳಿಗೆ ವಿವಿಧ ವ್ಯಕ್ತಿಗಳನ್ನು ನೇಮಿಸಿದೆ.
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ & ನ್ಯೂರೋಸೈನ್ಸ್‌ನ ಮಾಜಿ ನಿರ್ದೇಶಕ ಡಾ.ಗಂಗಾಧರ ಕಳೆದ ವರ್ಷ ಸೆಪ್ಟೆಂಬರ್‌ನಿಂದ ಎನ್‌ಎಂಸಿಯ ಕಾರ್ಯಾಧ್ಯಕ್ಷರಾಗಿದ್ದಾರೆ.ಮೊದಲ ಅಧ್ಯಕ್ಷ ಡಾ ಎಸ್ ಸಿ ಶರ್ಮಾ ಅವರ ಅಧಿಕಾರಾವಧಿ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಕೊನೆಗೊಂಡ ನಂತರ ಅವರು ಅಧಿಕಾರ ವಹಿಸಿಕೊಂಡರು. ಡಾ. ಗಂಗಾಧರ ಅವರ ಅಧಿಕಾರಾವಧಿಯು ನಾಲ್ಕು ವರ್ಷ ಅಥವಾ ಅವರಿಗೆ 70 ವರ್ಷ ತುಂಬುವವರೆಗೆ, ಈ ಪೈಕಿ ಯಾವುದು ಮೊದಲೋ ಅಲ್ಲಿಯವರೆಗೆ ಇರಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದಲ್ಲದೆ, ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ ಅಧ್ಯಕ್ಷರಾಗಿ ತಿರುವನಂತಪುರಂನ ಶ್ರೀ ಚಿತ್ರ ತಿರುನಾಳ್ ಇನ್‌ಸ್ಟಿಟ್ಯೂಟ್ ಫಾರ್ ಮೆಡಿಕಲ್ ಸೈನ್ಸಸ್ ಅಂಡ್ ಟೆಕ್ನಾಲಜಿಯ ನಿರ್ದೇಶಕ ಡಾ ಸಂಜಯ ಬಿಹಾರಿ ಅವರನ್ನು ನೇಮಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಮುಂಬೈನ ಅಪೋಲೋ ಆಸ್ಪತ್ರೆಯ ನಿರ್ದೇಶಕ (ಆಂಕೊಲಾಜಿ) ಡಾ ಅನಿಲ್ ಡಿಕ್ರೂಜ್ ಅವರನ್ನು ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿಯ ಸಂಪೂರ್ಣಅವಧಿಯ ಸದಸ್ಯರನ್ನಾಗಿ ಹಾಗೂ ಮುಂಬೈನ ಟಾಟಾ ಮೆಮೋರಿಯಲ್ ಸೆಂಟರ್‌ನಲ್ಲಿ ವಿಶ್ರಾಂತ ಪ್ರಾಧ್ಯಾಪಕ ಡಾ.ರಾಜೇಂದ್ರ ಅಚ್ಯುತ ಬಡ್ವೆ ಅವರನ್ನು ಪದವಿಪೂರ್ವ ವೈದ್ಯಕೀಯ ಶಿಕ್ಷಣ ಮಂಡಳಿಯ ಅರೆಕಾಲಿಕ ಸದಸ್ಯರನ್ನಾಗಿ ನೇಮಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement