ವೀಡಿಯೊ..| ಹತ್ರಾಸ್‌ ಕಾಲ್ತುಳಿತದ ಘಟನೆ ನಂತರ ಭೋಲೆ ಬಾಬಾ ಬೆಂಗಾವಲು ಜೊತೆ ಗ್ರಾಮ ತೊರೆದ ವೀಡಿಯೊ ವೈರಲ್‌

ಲಕ್ನೋ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಗೆ ಸಂಬಂಧಿಸಿದಂತೆ ಗುರುವಾರ ಆರು ಜರನ್ನು ಬಂಧಿಸಲಾಗಿದೆ. ಇದರ ಮಧ್ಯೆಯೇ ಸತ್ಸಂಗ ನಡೆಸಿದ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ (Bhole Baba) ಘಟನೆ ಬಳಿಕ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ವಾಹನದಲ್ಲಿ ಪರಾರಿಯಾಗಿರುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ.
ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ‘ಸೇವಕ’ ಎಂದೂ ಕರೆಯಲ್ಪಡುವ ಹಲವಾರು ಸ್ವಯಂಸೇವಕರು ಭೋಲೆ ಬಾಬಾ ಅವರ ಬೆಂಗಾವಲು ಕ್ರಾಸ್ ಮಾಡುವಾಗ ರಸ್ತೆಯ ಎರಡೂ ಬದಿಗಳಲ್ಲಿ ನಿಂತಿರುವುದನ್ನು ದೃಶ್ಯಾವಳಿ ತೋರಿಸುತ್ತದೆ.
ಮಂಗಳವಾರ ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ಪ್ರದೇಶದ ರಾತಿ ಭಾನಪುರ ಗ್ರಾಮದಲ್ಲಿ ವಿಶೇಷವಾಗಿ ಹಾಕಲಾದ ಟೆಂಟ್‌ನಲ್ಲಿ ಪ್ರಚಾರಕರು ಆಯೋಜಿಸಿದ್ದ ‘ಸತ್ಸಂಗ’ದಲ್ಲಿ ಸಾವಿರಾರು ಜನರು ಜಮಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ.

ನಾರಾಯಣ ಭೋಲೆ ಬಾಬಾ (Bhole Baba) ಎಂದು ಜನರಿಂದ ಕರೆಯಲ್ಪಡುವ ಸಕಾರ್‌ ಹರಿ (Narayan Sakaar Hari) ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತದಲ್ಲಿ 121 ಮಂದಿ ಮೃತಪಟ್ಟಿದ್ದು,ಅನೇಕರು ಗಾಯಗೊಂಡಿದ್ದಾರೆ. ದುರ್ಘಟನೆ ನಂತರ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಗುರುವಾರ ಆರು ಮಂದಿಯನ್ನು ಬಂಧಿಸಿದ್ದು, ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.
“ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು, ಇಬ್ಬರು ಮಹಿಳೆಯರು ಸೇರಿ ಆರು ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ದುರ್ಘಟನೆಯಲ್ಲಿ ಈವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಎಂದು ಅಲಿಗಢ ಐಜಿ ಶಲಭ ಮಾಥುರ್‌ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಎಸ್‌ಸಿಒ ಶೃಂಗಸಭೆಯ ಮುಖ್ಯಸ್ಥರ ಗ್ರುಪ್‌ ಫೋಟೊದಿಂದ ಪ್ರಧಾನಿ ಮೋದಿ ಫೋಟೊ ಕಟ್‌ ಮಾಡಿ ಪ್ರಕಟಿಸಿದ ಪಾಕಿಸ್ತಾನ ಪಿಎಂಒ !

ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದು ಹೇಳಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ ಹಾಗೂ ನ್ಯಾಯಾಮಗ ತನಿಖೆಗೆ ಆದೇಶಿಸಿದೆ.
ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ. ಹಾಗೂ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದು, ಅದರಲ್ಲಿ ಭೋಲೆ ಬಾಬಾ ಹೆಸರಿಲ್ಲ ಎಂದು ಹೇಳಲಾಗಿದೆ. ಅಗತ್ಯಬಿದ್ದರೆ ಅವರನ್ನು ವಿಚಾರಣೆಗೆ ಕರೆಯಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಭಾರತದ ವ್ಯಾಪಕ ಸಂಪರ್ಕ ಬಳಸಿ ಯುದ್ಧದ ಹಾದಿಯಲ್ಲಿರುವ ದೇಶಗಳನ್ನು ಸಂವಾದಕ್ಕೆ ಕರೆತನ್ನಿ : ಪ್ರಧಾನಿ ಮೋದಿಗೆ ಇರಾನ್ ಅಧ್ಯಕ್ಷರ ಮನವಿ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement