ಮಳೆ : ಜುಲೈ 5ರಂದು ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ‌ ಕಾಲ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ(ಜುಲೈ 5) ಕುಮಟಾ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ‌ರಜೆ ಘೋಷಣೆ ಮಾಡಿದ್ದಾರೆ. ಶುಕ್ರವಾರ ಕುಮಟಾ ತಾಲೂಕಿನಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ(ಜುಲೈ 5) ಕುಮಟಾ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ನಿಮ್ಮ ಕಾಮೆಂಟ್ ಬರೆಯಿರಿ

advertisement