ಗುಡ್ಡ ಕುಸಿತ: ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

ಕಾರವಾರ : ಉತ್ತರ ಜಿಲ್ಲೆಯಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಭಾರಿ ಮಳೆಗೆ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವಾಗಿದ್ದು, ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಬಂದ್(Bangalore-Honnavar National Highway​​​ ಆಗಿದೆ.
ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿದ್ದು, ಹೆದ್ದಾರಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ ಬಂಡೆಗಳು, ಮರಗಳು ಬಿದ್ದಿವೆ.
ಏಕಾಏಕಿ ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದ್ದು, ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿದ್ದು, ಹೆದ್ದಾರಿ ಮೇಲೆ ಭಾರಿ ಪ್ರಮಾಣದಲ್ಲಿ ಮಣ್ಣು, ಬೃಹತ್ ಬಂಡೆಗಳು, ಮರಗಳು ಬಿದ್ದಿವೆ. ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್‌ ಆಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ ಮಣ್ಣು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವುದು ತೊಂದರೆಯಾಗಿದ್ದು, ಮಣ್ಣು ತೆಗೆಯುವ ಕಾರ್ಯ ನಡೆದಿದೆ

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement