ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಬಂದಿದ್ದ ಗಂಗೂಬಾಯಿ ಮಾನಕರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನ ಅಬ್ದುಲ್ ನಜೀರ್ ಸಾಬ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕಿಯಾಗಿದ್ದ ಲಕ್ಷ್ಮಿ ಪ್ರಿಯಾ ಅವರನ್ನು ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ. ರಾಜ್ಯ ಸರ್ಕಾರ ಇದೀಗ ಲಕ್ಷ್ಮಿ ಪ್ರಿಯಾ ಅವರನ್ನು ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಲಕ್ಷ್ಮಿ ಪ್ರಿಯಾ ಈ ಹಿಂದೆ ಕುಮಟಾದಲ್ಲಿ ಸಹಾಯಕ ಆಯುಕ್ತರಾಗಿ ಎರಡು ವರ್ಷ ಕೆಲಸ ಮಾಡಿದ್ದಾರೆ.
ಸರ್ಕಾರ ಗಂಗೂಬಾಯಿ ಮಾನಕರ ಅವರನ್ನು ಕರ್ನಾಟಕ ಗೆಜಿಟಿಯರ್ ಇಲಾಖೆಯ ಸಂಪಾದಕಿ ಹುದ್ದೆಗೆ ವರ್ಗಾವಣೆ ಮಾಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ