ಬೆಂಗಳೂರು : ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಐದು ದಿನ(ಜುಲೈ 9)ಗಳ ವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಬೆಳಗಾವಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ರಾಜ್ಯದ ಶೃಂಗೇರಿ, ಕುಂದಾಪುರ, ಲಿಂಗನಮಕ್ಕಿ, ಕದ್ರಾ, ಸಿದ್ದಾಪುರ, ಮಂಕಿಯಲ್ಲಿ ಭಾರಿ ಮಳೆಯಾಗಿದೆ. ಕುಮಟಾ, ಹೊನ್ನಾವರ, ಯಲ್ಲಾಪುರ, ಬೆಳ್ತಂಗಡಿ, ಕಾರ್ಕಳ, ಶಿರಾಲಿ, ಭಾಗಮಂಡಲ, ಕೊಪ್ಪ, ಜಯಪುರ, ಹುಂಚದಕಟ್ಟೆ, ಕೊಟ್ಟಿಗೆಹಾರ, ಗೋಕರ್ಣ, ಧರ್ಮಸ್ಥಳ, ಲೋಂಡಾ, ಕಳಸ, ಕೋಟ, ತ್ಯಾಗರ್ತಿ, ಉಪ್ಪಿನಂಗಡಿಯಲ್ಲಿ ಜೋರಾಗಿ ಮಳೆಯಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ