ಕೇರಳದಲ್ಲಿ ಅಪರೂಪದ ‘ಮಿದುಳು ತಿನ್ನುವ ಅಮೀಬಾ’ ಸೋಂಕಿನ 4ನೇ ಪ್ರಕರಣ ಪತ್ತೆ

ಕೋಯಿಕ್ಕೋಡ್: ಕೇರಳದಲ್ಲಿ ಅಪರೂಪದ ಅಮೀಬಾ ಸೋಂಕಿನ (ಅಮೀಬಿಕ್ ಮೆನಿಂಗೂ ಎನ್ಸೆಫಾಲಿಟಿಸ್) ನಾಲ್ಕನೇ ಪ್ರಕರಣ ಪತ್ತೆಯಾಗಿದೆ.
ಉತ್ತರ ಕೇರಳದ ಕೋಯಿಕ್ಕೋಡ್ ಜಿಲ್ಲೆಯ 14 ವರ್ಷದ ಬಾಲಕ ಅಮೀಬಾ ಸೋಂಕಿನಿಂದ ಬಳಲುತ್ತಿದ್ದಾನೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಜುಲೈ 1ರಂದು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕನ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ. ಸೋಂಕನ್ನು ಬೇಗನೇ ಪತ್ತೆಹಚ್ಚಿದ ನಂತರ ವಿದೇಶದಿಂದ ತುರ್ತಾಗಿ ಔಷಧಿ ತಂದು ಚಿಕಿತ್ಸೆ ನೀಡಲು ಸಾಧ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
14 ವರ್ಷದ ಸೋಂಕಿತ ಬಾಲಕ ಉತ್ತರ ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಪಯ್ಯೋಲಿ ನಿವಾಸಿಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಕಳೆದ ಮೇ ತಿಂಗಳ ನಂತರ ಕೇರಳದಲ್ಲಿ ಪತ್ತೆಯಾದ ನಾಲ್ಕನೇ ಪ್ರಕರಣ ಇದಾಗಿದೆ. ಸೋಂಕಿತರೆಲ್ಲ ಮಕ್ಕಳಾಗಿದ್ದು, ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಅಮೀಬಿಕ್ ಮೆನಿಂಗೂ ಎನ್ಸೆಫಾಲಿಟಿಸ್ ( amoebic meningoencephalitis) ಅನ್ನು ‘ಮಿದುಳು ತಿನ್ನುವ ಅಮೀಬಾ’ ಎಂದು ಕರೆಯಲಾಗುತ್ತದೆ. ಈ ಸೋಂಕು ಕಲುಷಿತ ನೀರಿನ ಮೂಲಕ ಹರಡುತ್ತದೆ.
ಕೋಯಿಕ್ಕೋಡ್‌ ಜಿಲ್ಲೆಯಲ್ಲಿ ಬುಧವಾರ ಅಮೀಬಾ ಸೋಂಕು ಬಾಧಿತ 14 ವರ್ಷದ ಬಾಲಕ ಮೃತಪಟ್ಟಿದ್ದ. ಮೇ 21ರಂದು ಮಲಪ್ಪುರಂ ಜಿಲ್ಲೆಯಲ್ಲಿ 5 ವರ್ಷದ ಬಾಲಕಿ ಮತ್ತು ಜೂನ್ 25ರಂದು ಕಣ್ಣೂರು ಜಿಲ್ಲೆಯಲ್ಲಿ 13 ವರ್ಷದ ಬಾಲಕಿ ಮೃತಪಟ್ಟಿದ್ದರು.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಸಭೆ ನಡೆಸಿ, ಸೋಂಕು ಹರಡದಂತೆ ತಡೆಯಲು ಹಾಗೂ ಕಲುಷಿತ ನೀರಿನಲ್ಲಿ ಸ್ನಾನ ಮಾಡದಂತೆ ಸೂಚನೆ ನೀಡಿದ್ದರು ಎಂದು ತಿಳಿಸಿದ್ದರು.

ಪ್ರಮುಖ ಸುದ್ದಿ :-   ಪಾಕಿಸ್ತಾನಕ್ಕೆ ಐಎಂಎಫ್‌ನ ಬೇಲ್‌ಔಟ್ ಪ್ಯಾಕೇಜ್ ಮೇಲಿನ ಮತದಾನದಿಂದ ದೂರ ಉಳಿದ ಭಾರತ ; ಪಾಕಿಸ್ತಾನದ 'ಕಳಪೆ ದಾಖಲೆ'ಯ ಉಲ್ಲೇಖ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement