ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ.
ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ.
ಅಂತಿಮ ತಂಡದಲ್ಲಿ ರಿಚಾ ಘೋಷ್ ಮತ್ತು ಉಮಾ ಚೆಟ್ರಿ ಇಬ್ಬರು ವಿಕೆಟ್ ಕೀಪರ್‌ಗಳಾಗಿದ್ದು, ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್ ಅವರು ಮೀಸಲು ಆಟಗಾರರಾಗಿ ತಂಡದೊಂದಿಗೆ ಪ್ರಯಾಣಿಸಲಿದ್ದಾರೆ. ಅಮನ್ಜೋತ್ ಕೌರ್ ಮತ್ತು ಅನ್ ಕ್ಯಾಪ್ಡ್ ಯುವ ಆಟಗಾರ್ತಿ ಶಬ್ನಮ್ ಶಕೀಲ್ ಅವರನ್ನು ಕೈಬಿಡಲಾಗಿದೆ.

ಟಿ20 ಮಾದರಿಯಲ್ಲಿ ನಡೆಯಲಿರುವ ಏಷ್ಯಾಕಪ್ 9ನೇ ಆವೃತ್ತಿ ಜುಲೈ 19 ಮತ್ತು 28 ರ ನಡುವೆ ನಿಗದಿಯಾಗಿದೆ, ಎಲ್ಲಾ ಪಂದ್ಯಗಳು ಶ್ರೀಲಂಕಾದ ರಂಗಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿವೆ. ಭಾರತವು ಪಂದ್ಯಾವಳಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿದ್ದು, ಏಳು ಬಾರಿ ಕಪ್‌ ಗೆದ್ದಿದೆ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಮತ್ತು ನೇಪಾಳದೊಂದಿಗೆ ಎ ಗುಂಪಿನಲ್ಲಿ ಸೇರಿಕೊಂಡಿದೆ. ಭಾರತದ ತಂಡ ಈ ಬಾರಿ ಜುಲೈ 19 ರಂದು ಪಾಕಿಸ್ತಾನದ ವಿರುದ್ಧ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದ್ದು, ಜುಲೈ 21 ಮತ್ತು 23 ರಂದು ಯುಎಇ ಮತ್ತು ನೇಪಾಳವನ್ನು ಎದುರಿಸಲಿದೆ
ಮಹಿಳಾ ಏಷ್ಯನ್ ಕಪ್ ಗೆ ಭಾರತ ತಂಡ : ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್‌ ಕೀಪರ್‌), ಉಮಾ ಚೆಟ್ರಿ (ವಿಕೆಟ್‌ ಕೀಪರ್‌ ), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭನಾ , ರಾಧಾ ಯಾದವ್, ಶ್ರೇಯಾಂಕ ಪಾಟೀಲ್, ಸಜನಾ ಸಜೀವನ್
ಮೀಸಲು ಆಟಗಾರರು : ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್

ಪ್ರಮುಖ ಸುದ್ದಿ :-   ಹ್ಯಾರಿಯರ್ ಕಾರು, ನಕಲಿ ಎನ್‌ಎಸ್‌ಜಿ ಕಮಾಂಡೋಗಳು ! ಸೇನೆಯ ಬ್ರಿಗೇಡಿಯರ್ ಸೋಗಿನಲ್ಲಿ ಓಡಾಡುತ್ತಿದ್ದ ಯುವಕ ಬಲೆಗೆ ಬಿದ್ದಿದ್ದೇ ರೋಚಕ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement