
ದಾವಣಗೆರೆ : ಮಾಜಿ ಸಚಿವ ಬಿ.ಸಿ. ಪಾಟೀಲ ಅವರ ಅಳಿಯ ಕೆ.ಜಿ. ಪ್ರತಾಪಕುಮಾರ ಅವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಹಿರೆಕೆರೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಅವರು ಹೊನ್ನಾಳಿ ಬಳಿಯ ಅರಕೆರೆ ಗ್ರಾಮದ ಬಳಿ ರಸ್ತೆ ಸಮೀಪ ಕಾರಿನಲ್ಲಿ ಅವರ ವಿಷ ಸೇವನೆ ಮಾಡಿದ ರೀತಿಯಲ್ಲಿ ಪತ್ತೆಯಾಗಿದ್ದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅವರನ್ನು ಕಂಡ ಸ್ಥಳೀಯರು ಅವರನ್ನು ಹೊನ್ನಾಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ ಎಂದು ಹೇಳಲಾಗಿದೆ.
ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕತ್ತಲಗೆರೆ ಗ್ರಾಮದವರಾದ ಪ್ರತಾಪಕುಮಾರ (43) ಅವರು ಅವರು ಬಿ.ಸಿ. ಪಾಟೀಲ ಅವರ ಪ್ರಥಮ ಪುತ್ರಿ ಸೌಮ್ಯ ಅವರ ಪತಿ ಎಂದು ಹೇಳಲಾಗಿದೆ. ಬಿ.ಸಿ.ಪಾಟೀಲ ಅವರ ಊರು ಹಿರೇಕೆರೂರಿನಲ್ಲಿ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಹಾಗೂ ಅಲ್ಲಿಯೇ ಅವರು ವಾಸವಾಗಿದ್ದರು. ಪ್ರತಾಪಕುಮಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.



ನಿಮ್ಮ ಕಾಮೆಂಟ್ ಬರೆಯಿರಿ