ಮಳೆಯ ಅಬ್ಬರ ; ಜುಲೈ 9 ರಂದು ದಕ್ಷಿಣ ಕನ್ನಡ ಜಿಲ್ಲೆ ಎಲ್ಲ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು : ವ್ಯಾಪಕ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು(12ನೇ ತರಗತಿ ವರೆಗೆ)ಗಳಿಗೆ ಜುಲೈ 9ರಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಮಂಗಳವಾರ ಹವಾಮಾನ ಇಲಾಖೆ ರೆಡ್‌ಅಲರ್ಟ್‌ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜುಲೈ ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement