ಭಾರಿ ಮಳೆ ; ಜುಲೈ 9 ರಂದು ಉಡುಪಿ ಜಿಲ್ಲೆ ಶಾಲೆಗಳು-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿರುವುದರಿಂದ ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ (ಜುಲೈ 9 ) ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ಮಂಗಳವಾರ (ಜುಲೈ 9 ) ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.
ಪ್ರಾಕೃತಿಕ ವಿಕೋಪ ಸಂಬಂಧಿಸಿ ಜಿಲ್ಲಾಡಳಿತದ ಹೆಲ್ಪ್ ಲೈನ್ 1077, 0820 – 2574802 ಸಂಪರ್ಕಿಸಲು ಜಿಲ್ಲಾಡಳಿತ ಸೂಚಿಸಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement