ಪ್ರಧಾನಿ ಮೋದಿ ಭೇಟಿ ಫಲಶ್ರುತಿ; ತನ್ನಸೇನೆ ಸೇರಿದ್ದ ಭಾರತೀಯರ ಬಿಡುಗಡೆಗೆ ರಷ್ಯಾ ಸಮ್ಮತಿ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಭೇಟಿ ವೇಳೆ ಭಾರತಕ್ಕೆ ದೊಡ್ಡ ಗೆಲುವು ಲಭಿಸಿದೆ. ರಷ್ಯಾ ಸೇನೆಗೆ ನಿಯೋಜನೆಗೊಂಡಿದ್ದ ಭಾರತೀಯರನ್ನು ಬಿಡುಗಡೊಳಿಸಲು ರಷ್ಯಾ ಅಧ್ಯಕ್ಷ ಪುತಿನ್‌ ಸಮ್ಮತಿ ಸೂಚಿಸಿದ್ದಾರೆ.
ಎರಡು ದಿನಗಳ ಅಧಿಕೃತ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಭೇಟಿ ಸಂದರ್ಭದಲ್ಲಿ ಈ ನಿರ್ಧಾರ ಹೊರ ಬಿದ್ದಿದೆ.
ಪ್ರಸ್ತುತ ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು, ಹೀಗಾಗಿ ತನ್ನ ಸೇನೆಗೆ ಭಾರತೀಯ ಯೋಧರನ್ನು ರಷ್ಯಾ ನಿಯೋಜಿಸಿಕೊಂಡಿತ್ತು. ಅಲ್ಲದೆ ಯುದ್ಧದಲ್ಲಿ ಇಬ್ಬರು ಭಾರತೀಯ ಮೂಲದ ಯೋಧರು ಮೃತಪಟ್ಟಿದ್ದರು. ಹೀಗಾಗಿ ತನ್ನ ನಾಗರೀಕರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ನಿಯೋಜಿಸಿಕೊಳ್ಳಲು ಭಾರತ ತನ್ನ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಈಗ ನರೇಂದ್ರ ಮೋದಿಯವರ ಭೇಟಿ ಬಳಿಕ ಭಾರತೀಯರನ್ನು ಉಕ್ರೇನ್ ವಿರುದ್ಧದ ಹೋರಾಟಕ್ಕೆ ತನ್ನ ಸೇನೆಗೆ ಸೇರಿಸಿಕೊಳ್ಳದಿರಲು ರಷ್ಯಾ ಒಪ್ಪಿಗೆ ಸೂಚಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement