ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷೆಯಾಗಿ ಆಯೇಷಾ ಖಾನಂ ನೇಮಕ

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೂತನ ಅಧ್ಯಕ್ಷೆಯಾಗಿ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ನೇಮಕವಾಗಿದ್ದಾರೆ.
ಕರ್ನಾಟಕ ಸಾರ್ವಜನಿಕ ಮತ್ತು ಸಂಪರ್ಕ ಇಲಾಖೆ ವ್ಯಾಪ್ತಿಗೆ ಬರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಇದೇ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷೆಯನ್ನು ರಾಜ್ಯ ಸರ್ಕಾರ ನೇಮಕಗೊಳಿಸಿದೆ. ಜೊತೆಗೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಿಗೆ ಈ ಹುದ್ದೆ ಲಭಿಸಿದೆ.
ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತರಾದ ಚಿತ್ರದುರ್ಗದ ಎಂ.ಎನ್. ಆಹೋಬಳಪತಿ,‌ ಹಿರಿಯ ಪತ್ರಿಕಾ ಛಾಯಾಗ್ರಾಹಕ, ಬೆಂಗಳೂರಿನ ಕೆ.ವೆಂಕಟೇಶ್ ಹಾಗೂ ಹಿರಿಯ ಪತ್ರಕರ್ತ ಗಂಗಾವತಿಯ ಕೆ.ನಿಂಗಜ್ಜ ಅವರನ್ನು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.

 

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ ; ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement