ಮುಂಬೈ ಹಿಟ್ & ರನ್ ಪ್ರಕರಣ : ಶಿವಸೇನೆ ಉಪನಾಯಕ ಸ್ಥಾನದಿಂದ ಆರೋಪಿಯ ತಂದೆ ವಜಾ

ಮುಂಬೈ: ವರ್ಲಿ ಹಿಟ್ ಅಂಡ್ ರನ್ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ಪ್ರಕರಣದ ಪ್ರಮುಖ ಆರೋಪಿ ಮಿಹಿರ್‌ ಶಾ ತಂದೆ ರಾಜೇಶ ಶಾ ಅವರನ್ನು ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಉಪನಾಯಕ ಸ್ಥಾನದಿಂದ ತೆಗೆದುಹಾಕಲಾಗಿದೆ. ಪಕ್ಷದ ಮುಖ್ಯಸ್ಥ ಏಕನಾಥ ಶಿಂಧೆ ಅವರ ಸೂಚನೆ ಮೇರೆಗೆ ರಾಜೇಶ ಶಾ ಅವರನ್ನು ಉಪನಾಯಕ ಹುದ್ದೆಯಿಂದ ತೆಗೆದುಹಾಕಲಾಗಿದೆ ಎಂದು ಪಕ್ಷದ ಅಧಿಕೃತ ಪ್ರಕಟಣೆ ಬುಧವಾರ ತಿಳಿಸಿದೆ.
ಮಿಹಿರ್ ಶಾ ಬಂಧಿತ
ಹಿಟ್ ಅಂಡ್ ರನ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಿಹಿರ್ ಶಾನನ್ನು ಮಂಗಳವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನ ಪತ್ತೆಗೆ ಪೊಲೀಸರು 14 ತಂಡಗಳನ್ನು ರಚಿಸಿದ್ದರು. ಮಿಹಿರ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ವೋರ್ಲಿಯ ಡಾ ಅನ್ನಿ ಬೆಸೆಂಟ್ ರಸ್ತೆಯಲ್ಲಿ ಸ್ಕೂಟರ್‌ಗೆ ಢಿಕ್ಕಿ ಹೊಡೆದು, ಪತಿಯೊಂದಿಗೆ ಪ್ರಯಾಣಿಸುತ್ತಿದ್ದ ಕಾವೇರಿ ನಖ್ವಾ ಎಂಬ ಮಹಿಳೆಯನ್ನು ದೂರದ ವರೆಗೆ ಎಳೆದುಕೊಂಡು ಹೋಗಿತ್ತು. ಪರಿಣಾಮ ಅವರು ಮೃತಪಟ್ಟಿದ್ದರು. ಘಟನೆಯ ನಂತರ ಆರೋಪಿ ಪರಾರಿಯಾಗಿದ್ದ.
ಘಟನೆಯ ನಂತರ, ಮೃತಳ ಪತಿ ಪ್ರದೀಪ ನಖ್ವಾ ಅವರು ಮಿಹಿರ್ ಶಾ ಬಂಧನದಲ್ಲಿನ ವಿಳಂಬವನ್ನು ಪ್ರಶ್ನಿಸಿದ್ದಾರೆ. ಡಿಕ್ಕಿಯ ನಂತರ ತನ್ನ ಹೆಂಡತಿಯನ್ನು ಸೀಜೇ ಹೌಸ್‌ನಿಂದ ಸೀ ಲಿಂಕ್ ರಸ್ತೆ ವರೆಗೆ ಕಾರು ಎಳೆದೊಯ್ದಿದೆ ಎಂದು ಅವರು ವರದಿ ಮಾಡಿದ್ದಾರೆ. ಜುಲೈ 7 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿ BMW ಬೈಕ್‌ಗೆ ಡಿಕ್ಕಿ ಹೊಡೆದು ಮಹಿಳೆಯ ಸಾವಿಗೆ ಕಾರಣವಾಗಿತ್ತು.

ಪ್ರಮುಖ ಸುದ್ದಿ :-   ಹಳಿ ತಪ್ಪಿದ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ ರೈಲಿನ ಹಲವು ಬೋಗಿಗಳು ; ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement