ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ದದ್ದಲ್ ಮನೆ ಮೇಲೆ ಇ.ಡಿ. ದಾಳಿ

ಬಳ್ಳಾರಿ/ ರಾಯಚೂರು : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ‌ನ ಹಗರಣ ಹೊರಬಿದ್ದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಕ್ರಮಕ್ಕೆ ಸಂಬಂಧಿಸಿದಂತೆ ಯುನಿಯನ್ ಬ್ಯಾಂಕ್ ಕೂಡ ಜಾರಿ ನಿರ್ದೇಶನಾಯಕ್ಕೆ ದೂರು ನೀಡಿತ್ತು. ಅಲ್ಲದೆ ಈ ಬಗ್ಗೆ ಬ್ಯಾಂಕ್‌ ಸಿಬಿಐ ದೂರು ಸಹ ದಾಖಲಿಸಿದೆ.
ಬುಧವಾರ ಮುಂಜಾನೆ, ಸಿಆರ್‌ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ ಅಧಿಕಾರಿಗಳ ತಂಡ ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ‌ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ 8 ಮಂದಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ.

ನಾಗೇಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.ಇ.ಡಿ‌. ಅಧಿಕಾರಿಗಳು ನಾಗೇಂದ್ರ ಅವರ ಆಪ್ತರ ಮಾಹಿತಿ ಸಂಗ್ರಹಿಸುತ್ತಿದ್ದಾರೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ವೇಳೆ, ನಾಗೇಂದ್ರ ಅವರ ಆಪ್ತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ವರದಿಯಾಗಿದೆ.
ದದ್ದಲ್‌ ಮನೆ ಮೇಲೆಯೂ ದಾಳಿ…
ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದೆ ಎಂದು ವರದಿಯಾಗಿದೆ.
ರಾಯಚೂರು ಆಶಾಪುರ ರಸ್ತೆಯಲ್ಲಿ ಬರುವ 2ನೇ ವಾರ್ಡ್ ನಲ್ಲಿರುವ ದದ್ದಲ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಮೂರು ಜನ ಅಧಿಕಾರಿಗಳ ನೇತೃತ್ವದ ಎರಡು ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಗರಣ ಪ್ರಕರಣ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಅಲ್ಲದೆ, ಹಲವರ ಮನೆ, ಕಚೇರಿ ಮೇಲೆ ದಾಳಿ ನಡೆದಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರು, ಹೈದರಾಬಾದ್‌ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ; 16 ಕಡೆಗಳಲ್ಲಿ ಎನ್ಐಎ ದಾಳಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement