ವಾಲ್ಮೀಕಿ ನಿಗಮ ಹಗರಣ ; ಮಾಜಿ ಸಚಿವ ನಾಗೇಂದ್ರ ಆಪ್ತ ಸಹಾಯಕನ ವಶಕ್ಕೆ ಪಡೆದ ಇ.ಡಿ.

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ ಎಂಬವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಹಗರಣಕ್ಕೆ ಸಂಬಂಧಿಸಿದಂತೆ ಪಿಎ ಹರೀಶನನ್ನು ಬುಧವಾರ ವಶಕ್ಕೆ ಶಾಂತಿನಗರದ ಇ.ಡಿ. ಕಚೇರಿಗೆ ಕರೆತಂದಿದ್ದಾರೆ ಎಂದು ಹೇಳಲಾಗಿದೆ.
ಅಕ್ರಮವಾಗಿ ಹಣ ಸಾಗಾಟ ಮಾಡುವಲ್ಲಿ ಈತ ಪಾತ್ರ ಇರುವುದು ಇಡಿ ತನಿಖೆ ವೇಳೆ ಗೊತ್ತಾದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಿಗ್ಗೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಅವರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದರು. ರಾಯಚೂರು ಹಾಗೂ ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್​ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನ ಫ್ಲ್ಯಾಟ್​ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಚಪ್ಪಲಿ ಧರಿಸಿ ಹೋಗಿದ್ದಕ್ಕೆ ಫ್ರಿಡೊ ಸಿಇಒ, ಏಥರ್ ಸಹ-ಸಂಸ್ಥಾಪಕರಿಗೆ ಪ್ರವೇಶ ನಿರಾಕರಿಸಿದ್ದ ಬೆಂಗಳೂರು ರೆಸ್ಟೋರೆಂಟ್‌

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement