ಕೆಆರ್‌ಎಸ್ ಭರ್ತಿಯಾಗಿಲ್ಲ ; ಆದ್ರೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸ್ಸು

ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚಿಸಿದೆ. ಜುಲೈ 12 ರಿಂದ ಜುಲೈ 31 ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 ಟಿಎಂಸಿ (ಸರಾಸರಿ 11,500 ಕ್ಯುಸೆಕ್‌ ಹರಿವು) ಇರುವಂತೆ ಕರ್ನಾಟಕವು ತನ್ನ ಜಲಾಶಯಗಳಿಂದ ನೀರಿನ ಬಿಡುಗಡೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿದೆ.
ಈ ಮೂಲಕ ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ನೀರು ಬಿಡಬೇಕಾದ ಅನಿವಾರ್ಯತೆ ಎದುರಾಗಿದೆ. ನವದೆಹಲಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ನೀರು ಬಿಡುವಂತೆ ತಮಿಳುನಾಡು ವಾದ ಮಾಡಿದೆ. ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿಯಲ್ಲಿ ನೀರಿನ ಕೊರತೆ ಇದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ ಎಂದು ಕರ್ನಾಟಕದ ಪರ ಅಧಿಕಾರಿಗಳು ವಾದ ಮಂಡಿಸಿದ್ದಾರೆ.
ರಾಜ್ಯದ ಹಲವು ಕಡೆ ಭರ್ಜರಿ ಮಳೆಯಾಗುತ್ತಿದೆ, ಆದರೆ ಕೆಲವು ರಾಜ್ಯದಲ್ಲಿ ಹೆಚ್ಚಿನ ಮಳೆಯಾಗಿಲ್ಲ. ಇದರ ನಡುವೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್‌ಸಿ (CWRC) ಆದೇಶ ಹೊರಡಿಸಿದೆ.
ಎರಡೂ ರಾಜ್ಯಗಳ ವಾದ-ಪ್ರತಿವಾದ ಆಲಿಸಿದ ಸಿಡಬ್ಲ್ಯುಆರ್‌ಸಿ (CWRC), ಜುಲೈ 12ರಿಂದ 31ರ ವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ. ಕೆಆರ್ ಎಸ್ ಜಲಾಶಯ ಭರ್ತಿಯಾಗಲು ಇನ್ನೂ 20 ಅಡಿ ಬಾಕಿ ಇದೆ.

ಪ್ರಮುಖ ಸುದ್ದಿ :-   ಸಿದ್ದಾಪುರ : ಸರ್ಕುಳಿ ಸೇತವೆ ಮೇಲೆ 3 ಅಡಿಗಳಷ್ಟು ನೀರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement