ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಮಾಸ್ಟರ್ ಮೈಂಡ್ ಆರೋಪಿ ʼರಾಕಿʼ ಬಂಧಿಸಿದ ಸಿಬಿಐ

ನವದೆಹಲಿ: ನೀಟ್ ಪೇಪರ್ ಸೋರಿಕೆ ಪ್ರಕರಣದ ಕಿಂಗ್ ಪಿನ್ ಎಂದು ನಂಬಲಾದ ರಾಕೇಶ ರಂಜನ್ ಅಲಿಯಾಸ್ ರಾಕಿ ಎಂಬಾತನನ್ನು ಸಿಬಿಐ ಗುರುವಾರ ಮಧ್ಯಾಹ್ನ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಕೇಶ ರಂಜನ್ ನನ್ನು 10 ದಿನಗಳ ಕಾಲ ಏಜೆನ್ಸಿ ಕಸ್ಟಡಿಗೆ ಕಳುಹಿಸಲಾಗಿದೆ. ಸಿಬಿಐ ಬಿಹಾರದ ಪಾಟ್ನಾ ಬಳಿ ಎರಡು ಮತ್ತು ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿ ಎರಡು ಕಡೆ ಸಿಬಿಐ ದಾಳಿ ನಡೆಸಿದ ನಂತರ ಈ ಬಂಧನವಾಗಿದೆ.
ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯೊಂದರ ಪ್ರಾಂಶುಪಾಲರು ಮತ್ತು ಉಪಪ್ರಾಂಶುಪಾಲರು ಸೇರಿದಂತೆ 12 ಜನರನ್ನು ಇದುವರೆಗೆ ಬಂಧಿಸಲಾಗಿದೆ. ವಿವಿಧ ರಾಜ್ಯ ಪೊಲೀಸ್ ಪಡೆಗಳು ಮತ್ತು ಸಿಬಿಐ ನೀಟ್‌ (NEET)ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರಶ್ನೆ ಪತ್ರಿಕೆಗಳ ಸೋರಿಕೆಯನ್ನು ಒಳಗೊಂಡಿರುವ ರಾಷ್ಟ್ರೀಯ ದಂಧೆ ಬಗ್ಗೆ ತನಿಖೆ ನಡೆಸುತ್ತಿದೆ.
ಕಳೆದ ವಾರ ವಿದ್ಯಾರ್ಥಿಯೊಬ್ಬನನ್ನು ಪಾಟ್ನಾದಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ರಾಕಿಯನ್ನು ಹೊರತುಪಡಿಸಿ ಎಂಟು ಜನರನ್ನು ಬಂಧಿಸಿದೆ.
ರಾಷ್ಟ್ರವ್ಯಾಪಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯ ತನಿಖೆಯ ಕಾರ್ಯವನ್ನು ವಹಿಸಿಕೊಂಡ ಸಂಸ್ಥೆಯು ಬಿಹಾರದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಿಗೆ ಐದು ಎಫ್‌ಐಆರ್‌ ಸೇರಿದಂತೆ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಪ್ರಮುಖ ಸುದ್ದಿ :-   ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: 7 ಮಂದಿ ಸಾವು

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement