ಕರ್ನಾಟಕದ 13 ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು :  ಕರ್ನಾಟಕದಲ್ಲಿ ಜುಲೈ12ರ ನಂತರ ಮತ್ತೆ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ12ರಿಂದ ಉತ್ತರ ಒಳನಾಡಿನಲ್ಲಿ ಹಾಗೂ ಜುಲೈ 13 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಜುಲೈ 13ರಿಂದ ಮೂರು ದಿನಗಳ ಕಾಲ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 13ರಿಂದ ಮೂರು ದಿನ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿಯಲ್ಲಿ 13ರಿಂದ ಜುಲೈ 15ರ ವರೆಗೆ, ಬೀದರ ಜುಲೈ12 , ಕಲಬುರಗಿ ಜುಲೈ12 ಹಾಗೂ ಜುಲೈ 14, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಜುಲೈ 15ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಮುಖ ಸುದ್ದಿ :-   ಶಿರಸಿ : ಜುಲೈ 13ಕ್ಕೆ ಕರ್ಮಫಲ ಕಾದಂಬರಿ ಲೋಕಾರ್ಪಣೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement