ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಹಗರಣ: ಬಿಜೆಪಿ ಮಾಜಿ ಶಾಸಕ ಡಿ.ಎಸ್. ವೀರಯ್ಯ ಬಂಧನ

ಬೆಂಗಳೂರು: ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ನಡೆದಿದೆ ಎನ್ನಲಾದ 47.10 ಕೋಟಿ ರೂ.ಗಳ ಅಕ್ರಮ ಪ್ರಕರಣದಲ್ಲಿ ಬಿಜೆಪಿ ನಾಯಕ, ವಿಧಾನ ಪರಿಷತ್​ ಮಾಜಿ ಸದಸ್ಯ ಡಿ ಎಸ್ ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಈ ಹಗರಣದ ತನಿಖೆ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು ಮೈಸೂರಿನಲ್ಲಿ ಮುಡಾ ಅಕ್ರಮ ವಿರೋಧಿಸಿ ಶುಕ್ರವಾರ ಪ್ರತಿಭಟನೆಗೆ ತೆರಳಿದ್ದಾಗ ವೀರಯ್ಯರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.
2021ರಿಂದ 2023ರ ಅವಧಿಯಲ್ಲಿ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್‌ನ ಗುತ್ತಿಗೆ ನೀಡಿಕೆಯಲ್ಲಿ ಅಕ್ರಮ ನಡೆದಿದೆ ಎಂದು ವಿಲ್ಸನ್ ಗಾರ್ಡನ್‌ ಠಾಣೆಗೆ ಹಾಲಿ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್‌. ಶಿವಪ್ರಕಾಶ ದೂರು ನೀಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

ತುಂಡು ಗುತ್ತಿದೆ ಆಧಾರದಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ನೀಡಲಾಗಿತ್ತು. ಆ ಸಂಬಂಧ 2023 ಸೆಪ್ಟೆಂಬರ್​ 23ರಂದು ಎಫ್​ಐಆರ್ ದಾಖಲಾಗಿತ್ತು. ಆಗ ಡಿ.ಎಸ್.ವೀರಯ್ಯ ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಗಮದ ಅಧ್ಯಕ್ಷರಾಗಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ, 600ಕ್ಕೂ ಹೆಚ್ಚು ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಈಗ ಪರಿಷತ್‌ ಮಾಜಿ ಸದಸ್ಯ ವೀರಯ್ಯ ಅವರನ್ನು ಬಂಧಿಸಿದೆ.
ಬಳಿಕ ವೀರಯ್ಯ ಅವರು ಕ್ರಿಮಿನಲ್ ಮಿಸಲೇನಿಯಸ್ ಅರ್ಜಿಯನ್ನು ಅರ್ಜಿಯನ್ನು ಸಲ್ಲಿಸಿದ್ದರು. ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್​, ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಪ್ರಮುಖ ಸುದ್ದಿ :-   ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆಗಳಿಗೆ ಇಂದು (ಜೂ.25) ರಜೆ ಘೋಷಣೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement