ನಾಳೆಯಿಂದ ರಾಜ್ಯದಲ್ಲಿ ಮಳೆ ಜೋರು ; 5 ಜಿಲ್ಲೆಗಳಲ್ಲಿ ಮಳೆ ಆರ್ಭಟ, ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕೇರಳದ ಕರಾವಳಿಯಿಂದ ಹಿಡಿದು ಗುಜರಾತ್‌ ಕರಾವಳಿ ವರೆಗೆ ತೇವಾಂಶ ಭರಿತ ದಟ್ಟ ಮೋಡಗಳು ರಚನೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂದಿನ 2 ದಿನಗಳು ಅತಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಜುಲೈ 14 ಹಾಗೂ 15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ವೇಳೆ ಅವಧಿಯಲ್ಲಿ ದಿನಕ್ಕೆ 204 ಮಿಮೀ ಮಳೆ ಬೀಳಬಹುದು ಎಂದು ಅಂದಾಜಿಸಿದೆ.

ಜುಲೈ 16, 17ರಂದು ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಭಾನುವಾರ(ಜುಲೈ 14) ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗಾಳಿಯ ವೇಗವು 40-50 ಕಿ.ಮೀ. ತಲುಪುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.
ಕೊಡಗು ಹಾಗೂ ಹಾಸನ ಜಿಲ್ಲೆಗಳಿಗೆ ಜುಲೈ 14ರಿಂದ 17ರ ವರೆಗೆ ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮೈಸೂರು ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜುಲೈ 16ರ ವರೆಗೆ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

5 / 5. 4

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement