ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರ ವರೆಗೆ ಇಡಿ ಕಸ್ಟಡಿಗೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಜುಲೈ 18ರ ವರೆಗೆ ಇ.ಡಿ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಹೆಚ್ಚಿನ ವಿಚಾರಣೆ, ಮಹಜರು ಹಿನ್ನೆಲೆಯಲ್ಲಿ ಇಂದು, ಶನಿವಾರ ಬೆಳಿಗ್ಗೆ ನಾಗೇಂದ್ರ ಅವರನ್ನು ಯಲಹಂಕದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಜುಲೈ18 ರ ವರೆಗೆ ಇ.ಡಿ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಶುಕ್ರವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಯಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು 10 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ಬಳಿಕ ಬಂಧಿಸಿದ್ದಾರೆ.

ತಡರಾತ್ರಿ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ. ಇಂದು, ಶನಿವಾರ ಬೆಳಗ್ಗೆ ಯಲಹಂಕದಲ್ಲಿರುವ ಜಡ್ಜ್ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ಬಳಿಕ ನ್ಯಾಯಾಧೀಶರು ಜುಲೈ 18ರವರೆಗೆ ಇ.ಡಿ. ಕಸ್ಟಡಿಗೆ ನಾಗೇಂದ್ರರನ್ನು ನೀಡಿದ್ದಾರೆ.
ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಬಳಿಕ ಕಾಂಗ್ರೆಸ್‌ ಶಾಸಕ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶುಕ್ರವಾರ ಸಂಜೆ ನಂತರ ಬಂಧಿಸಿದರು. ಬಳಿಕ ರಾತ್ರಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು

ಪ್ರಮುಖ ಸುದ್ದಿ :-   ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement