ಜುಲೈ 22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ ಕೆಜಿ- ಯುಕೆಜಿ ಆರಂಭ : ಲಕ್ಷ್ಮೀ ಹೆಬ್ಬಾಳ್ಕರ

ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಜು.22ರಿಂದ ಪೂರ್ವ ಪ್ರಾಥಮಿಕ (ಎಲ್‌ಕೆಜಿ , ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಇಲಾಖೆ ವತಿಯಿಂದಲೇ ಮಕ್ಕಳಿಗೆ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಉಪಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. 0 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುತ್ತದೆ. ಮೊದಲ ಹಂತದಲ್ಲಿ 15-20 ಸಾವಿರ ಶಾಲೆಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಸಹ ಆರಂಭಿಸಲಿದ್ದೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement