ಸಿದ್ದಾಪುರ : ಖ್ಯಾತ ಯಕ್ಷಗಾನದ ಕಲಾವಿದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಿವಂಗತ ಅನಂತ ಹೆಗಡೆ ಕೊಳಗಿ ಅವರ ಪತ್ನಿ ಅರುಂಧತಿ ಅನಂತ ಹೆಗಡೆ (೮೨) ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಸ್ವಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಿಧನರಾಗಿದ್ದಾರೆ. ಮೃತರು ಯಕ್ಷಗಾನದ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ ಸೇರಿದಂತೆ ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರ ಭಾನುವಾರ ಬೆಳಿಗ್ಗೆ ನೆರವೇರಿತು.
ನಿಮ್ಮ ಕಾಮೆಂಟ್ ಬರೆಯಿರಿ