ಬೆಂಗಳೂರು: ಕೆ ಎಸ್ ಆರ್ ಟಿಸಿ ಟಿಕೆಟ್ ದರ ಹೆಚ್ಚಳ ಕುರಿತು ಸರ್ಕಾರ ಪ್ರಸ್ತಾವನೆ ಸಲ್ಲಿಕೆ ಕುರಿತು ಕೆ ಎಸ್ ಆರ್ ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ ಹೇಳಿಕೆ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಚಿಂತನೆ ಇಲ್ಲ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕೆ ಎಸ್ ಆರ್ ಟಿ ಸಹಿತ ನಾಲ್ಕು ನಿಗಮಗಳ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಹೇಳಿದ್ದಾರೆ.
ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶ್ರೀನಿವಾಸ ಅವರು ಕೆ ಎಸ್ ಆರ್ ಟಿಸಿ ಬಸ್ ಟಿಕೆಟ್ ( KSRTC Bus Ticket ) ದರ ಹೆಚ್ಚಳದ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳದ ಕುರಿತು ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ, ಅಲ್ಲದೆ ಟಿಕೆಟ್ ದರ ಏರಿಕೆಯಂತಹ ಯಾವುದೇ ಚಿಂತನೆ ರಾಜ್ಯ ಸರ್ಕಾರದ ಮಟ್ಟದಲ್ಲಿ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ