ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಜು.15) ಜಿಲ್ಲೆಯ ಎಲ್ಲ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಭಾರತೀಯ ಹವಾಮಾನ ಇಲಾಖೆಯು ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿ ವಿಪರೀತ ಮಳೆ ಬೀಳುವ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೋಮವಾರ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಮಾಡಿದ್ದಾರೆ.
ಅಲ್ಲದೆ, ನೀರು ನಿಂತಿರುವ ತಗ್ಗು ಪ್ರದೇಶ, ಕೆರೆ, ನದಿ ಹಾಗೂ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ