ಕಾಪಿರೈಟ್ ಉಲ್ಲಂಘನೆ; ನಟ ರಕ್ಷಿತ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು : ಕಾಪಿರೈಟ್ ಉಲ್ಲಂಘನೆ ಆರೋಪದಡಿ ಖ್ಯಾತ ನಟ ರಕ್ಷಿತ್ ಶೆಟ್ಟಿ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ.
ಎಂಆರ್‌ಟಿ ಮ್ಯೂಸಿಕ್‌ನ ಪಾಲುದಾರಿಕೆ ಹೊಂದಿರುವ ನವೀನಕುಮಾರ ಎಂಬವರು ’ಬ್ಯಾಚುಲರ್ ಪಾರ್ಟಿ ಸಿನಿಮಾದಲ್ಲಿನ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಿದ್ದಾರೆ.

ಕಳೆದ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತು. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ ೨೦೨೪ರ ಮಾರ್ಚ್‌ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ ಸಿನಿಮಾ ಗಮನಿಸಿದಾಗ ಎರಡು ಹಾಡುಗಳನ್ನು ಬಳಕೆ ಮಾಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.
ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನಕುಮಾರ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement