ವಿಪರೀತ ಮಳೆ : ನಾಳೆ (ಜುಲೈ 16) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ-ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 10 ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ (ಜುಲೈ 16)ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಡುಗೋಡ ಹಾಗೂ ಹಳಿಯಾಳ ತಾಲೂಕು ಹೊರತುಪಡಿಸಿ ಜಿಲ್ಲೆಯ ಹತ್ತು ತಾಲೂಕುಗಳು, ಅಂದರೆ ಕಾರವಾರ ಅಂಕೋಲಾ, ಹೊನ್ನಾವರ, ಕುಮಟಾ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಮತ್ತು ಜೋಯಿಡಾ ತಾಲೂಕಿನ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ (ಜುಲೈ 15 ರಂದು) ರಜೆ ನೀಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 18ರ ಬೆಳಿಗ್ಗೆ ವರೆಗೂ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕಳೆದೆರಡು ದಿನಗಳಿಂದ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ವಿಪರೀತ ಮಳೆಯಗುತ್ತಿರುವುದರಿಂದ ನದಿಗಳು ಸಹ ಉಕ್ಕಿ ಹರಿಯುತ್ತಿವೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement