ವಿಪರೀತ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಜುಲೈ 19ಕ್ಕೆ ರಜೆ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ (ಜುಲೈ 19) ಜಿಲ್ಲೆಯ ಐದು ತಾಲೂಕುಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಜುಲೈ 19ರಂದು ರಜೆ ಘೋಷಣೆ ಮಾಡಲಾಗಿದೆ. ಪದವಿ ಕಾಲೇಜುಗಳಿಗೆ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಅಲ್ಲದೆ, ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕುಗಳ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ..| ಆಡಳಿತ ಸಂಪೂರ್ಣ ವಿಫಲ ; ಬಿ.ಆರ್.​ ಪಾಟೀಲ ಬೆನ್ನಲ್ಲೇ ತಮ್ಮ ಸರ್ಕಾರದ ವಿರುದ್ಧವೇ ಸಿಡಿದೆದ್ದ ಮತ್ತೊಬ್ಬ ಕಾಂಗ್ರೆಸ್ ಶಾಸಕ ; ರಾಜೀನಾಮೆ ಮಾತು

ನಿಮ್ಮ ಕಾಮೆಂಟ್ ಬರೆಯಿರಿ

advertisement