ಭಾರಿ ಮಳೆ ಮುನ್ಸೂಚನೆ ; ಕರ್ನಾಟಕದ ಐದು ಜಿಲ್ಲೆಗಳಿಗೆ ಇಂದು ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿದ್ದು, ಆರು ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜುಲೈ 19ರಂದು ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆಯು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಕೊಡಗು ಜಿಲ್ಲೆಯಲ್ಲಿಯೂ ಬಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಹೇಳಿದೆ.

ಬೆಳಗಾವಿ, ಹಾವೇರಿ, ಧಾರವಾಡ, ಯಾದಗಿರಿ ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ, ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
6 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ :
ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಶುಕ್ರವಾರ (ಜು.19) ಎಲ್ಲ ಅಂಗನವಾಡಿ, ಶಾಲೆ- ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆಯ ಹಾಸನ, ಆಲೂರು, ಸಕಲೇಶಪುರ, ಬೇಲೂರು, ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನಲ್ಲಿ 19, 20ರಂದು 2 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ; ಸಿಎಂ ಡಿಕೆ ಶಿವಕುಮಾರ ಘೋಷಣೆ

 

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement