ಉತ್ತರ ಕನ್ನಡ ಜಿಲ್ಲೆ: ಶಾಲೆ- ಕಾಲೇಜುಗಳಿಗೆ ಇಂದು (ಜುಲೈ 20) ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾಗೂ ರೆಡ್‌ ಅಲರ್ಟ್‌ ಘೋಷಣೆಯಾಗಿರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 20) ರಜೆ ಘೋಷಿಸಲಾಗಿದೆ.
ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, ಮುಂಡಗೋಡ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 20) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಮಾಹಿತಿ ನೀಡಿದ್ದಾರೆ

5 / 5. 4

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ನಿಮ್ಮ ಕಾಮೆಂಟ್ ಬರೆಯಿರಿ

advertisement