ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ದುರಂತ ಸ್ಥಳ ಪರಿಶೀಲಿಸಲು ನಾಳೆ (ಜುಲೈ 21) ಭಾನುವಾರ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರಸ್ತೆ, ಮನೆ ಬಿದ್ದಿರುವುದು ಹಾಗೂ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಕಾರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು. ಹಾಗೂ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ತೆರಳುತ್ತಿರುವುದಾಗಿ ತಿಳಿಸಿದರು
ವಿಜಯೇಂದ್ರ ಭೇಟಿ:
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭಾನುವಾರ (ಜುಲೈ 21) ಮಧ್ಯಾಹ್ನ 3 ಗಂಟೆಗೆ ಶಿರೂರು, ಉಳುವರೆ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಲಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ