ಯುಪಿಎಸ್‌ಸಿ ಅಧ್ಯಕ್ಷ ಮನೋಜ ಸೋನಿ ರಾಜೀನಾಮೆ

ನವದೆಹಲಿ; ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧ್ಯಕ್ಷ ಮನೋಜ ಸೋನಿ ಅವರು ಮೇ 2029 ರಲ್ಲಿ ತಮ್ಮ ಅಧಿಕಾರಾವಧಿಯು ಮುಕ್ತಾಯಗೊಳ್ಳುವ ಮೊದಲು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರಸುತ್ತಲಿನ ವಿವಾದಗಳು ಮತ್ತು ಆರೋಪಗಳಿಗೂ ಅವರ ರಾಜೀನಾಮೆಗೂ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲ ಎಂದು ಮೂಲಗಳು ತಿಳಿಸಿವೆ.
“ಯುಪಿಎಸ್‌ಸಿ ಅಧ್ಯಕ್ಷರು 15 ದಿನಗಳ ಹಿಂದೆ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ರಾಜೀನಾಮೆ ನೀಡಿದ್ದಾರೆ. ಅದನ್ನು ಇನ್ನೂ ಅಂಗೀಕಾರವಾಗಿಲ್ಲ” ಎಂದು ಅದು ತಿಳಿಸಿದೆ. ಸೋನಿ ಯುಪಿಎಸ್‌ಸಿ ಅಧ್ಯಕ್ಷರಾಗಿ ಮುಂದುವರಿಯಲು ಉತ್ಸುಕರಾಗಿಲ್ಲ ಮತ್ತು ರಿಲೀವ್ ಮಾಡುವಂತೆ ಮನವಿ ಮಾಡಿದ್ದಾರೆ. ಆದರೆ, ಆಗ ಅವರ ಮನವಿಯನ್ನು ಸ್ವೀಕರಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.

ಯುಪಿಎಸ್‌ಸಿಯಲ್ಲಿ ನೇಮಕಗೊಳ್ಳುವ ಮೊದಲು, ಸೋನಿ ಮೂರು ಅವಧಿಗೆ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. ಇವುಗಳಲ್ಲಿ ಆಗಸ್ಟ್ 1, 2009 ರಿಂದ ಜುಲೈ 31, 2015 ರವರೆಗೆ ಗುಜರಾತ್‌ನ ಡಾ ಬಾಬಾಸಾಹೇಬ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯದ (BAOU) ಉಪಕುಲಪತಿಯಾಗಿ ಸತತ ಎರಡು ಅವಧಿ ಕಾರ್ಯನಿರ್ವಹಿಸಿದ್ದಾರೆ. ಮತ್ತು ಏಪ್ರಿಲ್ 2005 ರಿಂದ ಏಪ್ರಿಲ್ 2008 ರವರೆಗೆ ಬರೋಡಾದ ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯದ (MSU) ಉಪಕುಲಪತಿಯಾಗಿ ಕೆಲಸ ಮಾಡಿದ್ದಾರೆ.
ಮಹಾರಾಜ ಸಯಾಜಿರಾವ್ ವಿಶ್ವವಿದ್ಯಾಲಯ ಸೇರುವ ಸಮಯದಲ್ಲಿ, ಸೋನಿ ಅವರು ಭಾರತದಲ್ಲಿ ಅತ್ಯಂತ ಕಿರಿಯ ಉಪಕುಲಪತಿಯಾಗಿದ್ದರು. ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಪರಿಣತಿ ಹೊಂದಿರುವ ರಾಜಕೀಯ ವಿಜ್ಞಾನದ ವಿದ್ವಾಂಸರಾದ ಸೋನಿ ಅವರು ಎರಡು ವಿಶ್ವವಿದ್ಯಾಲಯಗಳ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ ಅವಧಿಯನ್ನು ಹೊರತುಪಡಿಸಿ.1991 ಮತ್ತು 2016 ರ ನಡುವೆ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ (SPU), ವಲ್ಲಭ ವಿದ್ಯಾನಗರದಲ್ಲಿ ಅಂತಾರಾಷ್ಟ್ರೀಯ ಸಂಬಂಧಗಳ ಬಗ್ಗೆ ಬೋಧನೆ ಮಾಡಿದ್ದಾರೆ

ಪ್ರಮುಖ ಸುದ್ದಿ :-   ವೀಡಿಯೊ...| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement