ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಭೇಟಿ ; ಇದು ರಾಜಕಾರಣದ ಸಮಯವಲ್ಲ, ಸರ್ಕಾರ ಜನರ ನೆರವಿಗೆ ನಿಲ್ಲಬೇಕು : ಕುಮಾರಸ್ವಾಮಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡ ಕುಸಿತವಾದ ಸ್ಥಳಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇಂತಹ ದುರಂತದ ಸಂದರ್ಭದಲ್ಲಿಪುಡಿಗಾಸು ಪರಿಹಾರ ನೀಡುವುದರ ಬದಲು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡವರಿಗೆ, ಬೆಳೆ ಹಾನಿ ಸಂಭವಿಸಿದ ರೈತರಿಗೆ ಅವರು ಬದುಕು ರೂಪಿಸಿಕೊಳ್ಳುವ ಮಟ್ಟದಲ್ಲಿ ಪರಿಹಾರ ಘೋಷಣೆ ಆಗಬೇಕು ಎಂದರು.
ಮಳೆಯಿಂದ ಆಗಿರುವ ವ್ಯಾಪಕ ಹಾನಿಯನ್ನು ಕೇವಲ ವೀಡಿಯೊ ಕಾನ್ಫರೆನ್ಸ್ ಮಾಡುವ ಬದಲು ಜನರ ನಡುವೆ ಬಂದು ಧೈರ್ಯ ತುಂಬುವ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು. ರಾಜ್ಯ ಸರ್ಕಾರ ತೊಂದರೆಗೊಳಗಾದ ಕುಟುಂಬದ ಜೊತೆ ಇರಬೇಕು. ಇಂತಹ ದುರಂತದ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಎಂದು ರಾಜಕಾರಣ ಮಾಡಬಾರದು ಎಂದು ಕುಮಾರಸ್ವಾಮಿ ಹೇಳಿದರು.

ದುರಂತದ ಬಗ್ಗೆ ಖೇದ ವ್ಯಕ್ತಪಡಿಸಿದ ಅವರು, ಘಟನೆಯಿಂದ ಒಂದೇ ಕುಟುಂಬದ ಐವರು ಮೃತಪಟ್ಟಿರುವುದು ಬಹಳ ನೋವಿನ ಸಂಗತಿ. ಅವೈಜ್ಞಾನಿಕ ಕಾಮಗಾರಿಯಿಂದ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಅರಣ್ಯ ಇಲಾಖೆಯ ಕೆಲವು ಕಾನೂನುಗಳಿಂದಲೂ ಕಾಮಗಾರಿ ಸಂದರ್ಭದಲ್ಲಿ ನಿಯಮಗಳ ಹೆಸರಿನಲ್ಲಿ ನಿರ್ಬಂಧ ಹೇರಲ್ಪಡುವುದು ಸಹ ಇಂಥ ಘಟನೆಗಳಿಗೆ ಕಾರಣವಾಗುತ್ತಿದೆ ಎಂದರು.
2018ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಆಗಿದ್ದಾಗ ಕೊಡಗು ಭಾಗದಲ್ಲಿ ಭೂ ಕುಸಿತ ಸಂಭವಿಸಿತ್ತು. ಆಗ ಮನೆ ಕಳೆದುಕೊಂಡವರಿಗೆ ಹತ್ತು ಲಕ್ಷ ರೂ. ಹಣ ಕೊಟ್ಟಿದ್ದೆವು. ಇಲ್ಲಿ ಗುಡ್ಡ ಕುಸಿತದಿಂದ ಪ್ರಾಣ ಹಾನಿಯಾಗಿದೆ, ಆಸ್ತಿ ಹಾನಿಯಾಗಿದೆ. ರಾಜ್ಯ ಸರ್ಕಾರ ಸಂತೃಸ್ತರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕಿತ್ತು. ಆದರೆ ರಾಜ್ಯ ಸರ್ಕಾರ ಇದರಲ್ಲಿಯೂ ರಾಜಕಾರಣ ಮಾಡುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಪ್ರಮುಖ ಸುದ್ದಿ :-   ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ರಾಜ್ಯ ಸರ್ಕಾರ ಏನು ಮಾಡುತ್ತಿದೆ..? ಹಿಂದೆ ನಾನು ಮುಖ್ಯ ಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಕೇಳದೇ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಿರಲಿಲ್ಲವೇ ಎಂದು ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು. ಕೇಂದ್ರದ ಎನ್ ಡಿ ಆರ್ ಎಫ್ ತಂಡ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದೆ. ಅದು ಕೇಂದ್ರ ಸರ್ಕಾರದ ಅಂಗವಲ್ಲವೇ. ಮೊದಲು ಇಂತಹ ಘಟನೆಯಲ್ಲಿ ರಾಜಕಾರಣ ಮಾಡುವುದನ್ನು ರಾಜ್ಯ ಸರ್ಕಾರ ಜನರ ನೆರವಿಗೆ ಬರಬೇಕು ಎಂದು ಹೇಳಿದರು. ಪ್ರಧಾನಿಗೆ ಈ ಬಗ್ಗೆ ಮನವಿ ಮಾಡಿ ಈ ಘಟನೆಯಲ್ಲಿ ನೊಂದವರಿಗೆ ಯಾವ ರೀತಿಯಲ್ಲಿ ಪರಿಹಾರ ನೀಡಲು ಸಾಧ್ಯವಿದೆ ಎನ್ನುವ ಕುರಿತು ಚರ್ಚೆ ನಡೆಸಲಾಗುವುದು.
ಮಾಜಿ ಸಚಿವ ಆನಂದ ಅಸ್ನೋಟಿಕರ್, ಜೆಡಿಎಸ್ ಪ್ರಮುಖ ಸೂರಜ ನಾಯ್ಕ ಸೋನಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement