ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯ ನಾಲ್ಕು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಬುಧವಾರ (ಜುಲೈ 24) ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಖಾನಾಪುರ, ಬೈಲಹೊಂಗಲ ಮತ್ತು ಕಿತ್ತೂರು ತಾಲೂಕಿನ ಅಂಗನವಾಡಿ, ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಅದೇ ರೀತಿ ಬೆಳಗಾವಿ ಮತ್ತು ಖಾನಾಪುರ ಈ ಎರಡು ತಾಲೂಕಿನ ಪದವಿ ಪೂರ್ವ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ