ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 27ರ ವರೆಗೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಕೇರಳ ಕರಾವಳಿ ಭಾಗದಲ್ಲಿ ದಟ್ಟ ಮೋಡ ಆವರಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜುಲೈ 27ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆ ನಾಡಿನ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ಆರೇಂಜ್‌ ಅಲರ್ಟ್‌ ನೀಡಲಾಗಿದೆ. ಅಂದರೆ ಈ ಭಾಗದಲ್ಲಿ 115.5 ಮಿಮೀಟರ್ ವರೆಗೂ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಜುಲೈ 27 ರವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ, ವಿಯಜಪುರ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರೀ ಮಳೆಯ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರೀ ಗಾಳಿ ಮಳೆಯ ಸಾಧ್ಯತೆ ಇರಲಿದೆ. ದಕ್ಷಿಣ ಹಾಗೂ ಉತ್ತರ ಒಳನಡಿನ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಂದು ತಿಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ 15 ಸೆಂಮೀ ಮಳೆಯಾಗಿದ್ದು, ಆಗುಂಬೆಯಲ್ಲಿ 12 ಸೆಂಮೀ ಲೋಂಡಾ ಬೆಳಗಾವಿಯಲ್ಲಿ 7 ಸೆಂ ಮೀ ಮಳೆಯಾಗಿದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement