ಭಾರಿ ಮಳೆ: ಬೆಳಗಾವಿ ಜಿಲ್ಲೆಯ ಇನ್ನೂ 4 ತಾಲೂಕಿನ ಶಾಲೆಗಳಿಗೆ ನಾಳೆ (ಜು. 26) ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನೂ ಕೆಲ ತಾಲೂಕುಗಳಿಗೆ ಶುಕ್ರವಾರ (ಜುಲೈ 26 ) ರಜೆ ಘೋಷಿಸಲಾಗಿದೆ.
ಜಿಲ್ಲೆಯ ಗೋಕಾಕ, ಮೂಡಲಗಿ , ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಶುಕ್ರವಾರ (ಜುಲೈ 26) ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಈ ತಾಲೂಕುಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿರುವುದರಿಂದ ಶಾಲಾ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಆಗ್ರತಾ ಕ್ರಮವಾಗಿ ಜುಲೈ 26 ರಂದು ರಜೆ ಘೋಷಣೆ ಮಾಡಲಾಗಿದೆ. ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ಅವರು ತಿಳಿಸಿದ್ದಾರೆ.ಈಗಾಗಲೇ ಬೆಳಗಾವಿ ಚಿಕ್ಕೋಡಿ ಬೈಲಹೊಂಗಲ ಕಿತ್ತೂರು, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕುಗಳಲ್ಲಿ ಭಾರೀ ಮಳೆಯ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement