ಮಂಗಳೂರು ಕಾರಾಗೃಹದ ಮೇಲೆ ದಾಳಿ; ಗಾಂಜಾ, ಡ್ರಗ್ಸ್, 25 ಮೊಬೈಲ್ ವಶ

ಮಂಗಳೂರು: ನಗರದ ಕೋಡಿಯಲ್ ಬೈಲಿನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ 25 ಮೊಬೈಲ್ ಫೋನ್, ಒಂದು ಬ್ಲೂ ಟೂತ್ ಡಿವೈಸ್, 5 ಇಯರ್ ಫೋನ್, ಒಂದು ಪೆನ್ ಡ್ರೈವ್, 5 ಚಾರ್ಜರ್ ಗಳು, ಕತ್ತರಿಗಳು, 3 ಕೇಬಲ್‌ಗಳು ಹಾಗೂ ಗಾಂಜಾ, ಡ್ರಗ್ಸ್ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್ ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಪ್ರತ್ಯೇಕ ತಂಡಗಳಾಗಿ ಜೈಲಿನ ವಿವಿಧ ಬ್ಲಾಕ್ ಗಳಲ್ಲಿ ತಪಾಸಣೆ ನಡೆಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮಂಗಳೂರು ವಿವಿ 'ಯಕ್ಷಮಂಗಳ ಕೃತಿ ಪ್ರಶಸ್ತಿʼಗೆ ಅಶೋಕ ಹಾಸ್ಯಗಾರರ 'ದಶರೂಪಕಗಳ ದಶಾವತಾರ' ಸಂಶೋಧನಾ ಪುಸ್ತಕ ಆಯ್ಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement