ಮಳೆ: ಇಂದು (ಜುಲೈ 27) ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 10 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಶನಿವಾರ (ಜುಲೈ 27) ರಜೆ ಘೋಷಿಸಲಾಗಿದೆ.
ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರ, ದಾಂಡೇಲಿ, ಜೋಯಿಡಾ, ಶಿರಸಿ, ಸಿದ್ದಾಪುರ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಶನಿವಾರ (ಜುಲೈ 27) ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ

 

4 / 5. 4

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಇಂದು ಸಿಎಂ ಆಗಿ ಡಿಕೆ ಶಿವಕುಮಾರ ಪ್ರಮಾಣ ವಚನ: ಪರಮೇಶ್ವರ ಡಿಸಿಎಂ ; 13 ಶಾಸಕರಿಗೆ ಸಚಿವ ಸ್ಥಾನ ; ಪಟ್ಟಿ ಇಲ್ಲಿದೆ

ನಿಮ್ಮ ಕಾಮೆಂಟ್ ಬರೆಯಿರಿ

advertisement